IPL 2026 Retention: ಐಪಿಎಲ್ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದಿಂದ ಸ್ಟಾರ್ ಆಲ್​ರೌಂಡರ್ ಹೊರಬೀಳುವುದು ಖಚಿತವಾಗಿದೆ. ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಇಂಗ್ಲೆಂಡ್​​ನ ಆಲ್​ರೌಂಡರ್​ನನ್ನು ರಿಟೈನ್ ಮಾಡದಿರಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ನಿರ್ಧರಿಸಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೆಲವು ಆಟಗಾರರನ್ನು ರಿಲೀಸ್ ಮಾಡಲು ನಿರ್ಧರಿಸಿದೆ. ಈ ರಿಲೀಸ್ ಪಟ್ಟಿಯಲ್ಲಿ ಇಂಗ್ಲೆಂಡ್​ನ ಸ್ಟಾರ್ ಆಲ್​ರೌಂಡರ್​ನ ಹೆಸರು ಮುಂಚೂಣಿಯಲ್ಲಿದೆ.

ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಲಿಯಾಮ್ ಲಿವಿಂಗ್​ಸ್ಟೋನ್ ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಕಳೆದ ಸೀಸನ್​ನಲ್ಲಿ ಕಳಪೆ ಪ್ರದರ್ಶನ ನೀಡಿರುವ ಕಾರಣ ಲಿವಿಂಗ್​ಸ್ಟೋನ್ ಅವರನ್ನು ತಂಡದಿಂದ ರಿಲೀಸ್ ಮಾಡಲು ನಿರ್ಧರಿಸಲಾಗಿದೆ ಎಂದು ಆರ್​ಸಿಬಿ ಮೂಲಗಳು ತಿಳಿಸಿವೆ.\

ಲಿಯಾಮ್ ಲಿವಿಂಗ್​ಸ್ಟೋನ್ ಕಳೆದ ಸೀಸನ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 10 ಪಂದ್ಯಗಳನ್ನಾಡಿದ್ದರು. ಈ ವೇಳೆ ಒಂದು ಅರ್ಧಶತಕದೊಂದಿಗೆ ಕಲೆಹಾಕಿರುವುದು ಕೇವಲ 111 ರನ್​​ಗಳು ಮಾತ್ರ. ಅಂದರೆ ಕೇವಲ 16ರ ಸರಾಸರಿಯಲ್ಲಿ ರನ್​ ಗಳಿಸಿದ್ದರು. ಇನ್ನು ಬೌಲಿಂಗ್ ಮೂಲಕ ಪಡೆದಿರುವುದು ಕೇವಲ 2 ವಿಕೆಟ್ ಮಾತ್ರ.

Share.